9 ಜಿಲ್ಲೆಗಳಲ್ಲಿ ಕರ್ಪ್ಯೂ ಮಾದರಿಯಲ್ಲಿ ಲಾಕ್ ಡೌನ್ : ಮನೆಯಿಂದ ಹೊರಬಂದ್ರೆ ಹುಷಾರ್ !

0

ಬೆಂಗಳೂರು : ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೊರೊನಾ ಪೀಡಿತ 9 ಜಿಲ್ಲೆಗಳಲ್ಲಿ ಕರ್ಪ್ಯೂ ಮಾದರಿಯಲ್ಲಿ ಲಾಕ್ ಡೌನ್ ಜಾರಿ ಮಾಡಿ ಜನರನ್ನು ಗೃಹಬಂಧನದಲ್ಲಿರಿಸಲು ರಾಜ್ಯಸರಕಾರ ಕ್ರಮಕೈಗೊಂಡಿದೆ.

ಈ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ನಿನ್ನೆ ಲಾಕ್ ಡೌನ್ ಜಾರಿ ಮಾಡಿರೋ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಗಳೂರು, ಕೊಡಗು, ಬೆಳಗಾವಿ, ಧಾರವಾಡ, ಚಿಕ್ಕಬಳ್ಳಾಪುರ, ಕಲಬುರಗಿ, ಮೈಸೂರು ಜಿಲ್ಲೆಗಳಲ್ಲಿ ಕರ್ಪ್ಯೂ ಹೇರಲಾಗಿದೆ. ಅಗತ್ಯ ವಸ್ತುಗಳಾದ ಹಾಲು, ಔಷಧ ಖರೀದಿಗಷ್ಟೇ ಅವಕಾಶವನ್ನು ಕಲ್ಪಿಸಲಾಗುತ್ತಿದೆ.

ಈ ಜಿಲ್ಲೆಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಯಾವುದೇ ಕಾರಣಕ್ಕೂ ಜನರು ಮನೆಯಿಂದ ಹೊರಬರದಂತೆ ನಿಷೇಧ ಹೇರಲಾಗಿದೆ. ಒಂದೊಮ್ಮೆ ಜನರು ಮನೆಯಿಂದ ಹೊರ ಬಂದ್ರೆ ಅಂತಹವರ ವಿರುದ್ದ ಕಠಿಣ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಇನ್ನೊಂದೆಡೆ ರಾಜ್ಯದಾದ್ಯಂತ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

Leave A Reply

Your email address will not be published.