ತಿರುವನಂತಪುರ : ಕರೀಪುರ ವಿಮಾನ ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದು, 123 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಲಪುರ ಎಸ್ಪಿ ಅವರು ಪ್ರಮುಖ ಸುದ್ದಿ ಸಂಸ್ಥೆ ಎಎನ್ಐ ಗೆ ತಿಳಿಸಿದ್ದಾರೆ.

ವಂದೇ ಮಾತರಂ ವಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾ ವಿಮಾನ 180 ಮಂದಿ ಪ್ರಯಾಣಿಕರನ್ನು ಹೊತ್ತು ತಾಯ್ನಾಡಿಗೆ ಮರಳುತ್ತಿತ್ತು. ಕೊಯೀಂಕೋಡ್ ನ ಕರೀಪುರ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಆಗುವ ವೇಳೆಯಲ್ಲಿ ವಿಮಾನ ನೆಲಕ್ಕೆ ಉರುಳಿದ್ದು, ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡುವ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.ಮೃತ ಮೃತದೇಹಗಳನ್ನು ಪತ್ತೆಹಚ್ಚಲಾಗುತ್ತಿದೆ. ಹವಾಮಾನ ವೈಪರುತ್ಯದಿಂದಲೇ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಡಿಜಿಸಿಎ ತನಿಖೆಯನ್ನು ಮುಂದುವರಿಸಿದೆ. ಘಟನಾ ಸ್ಗಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.