ನವದೆಹಲಿ : ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇರಳದ ಕಾಸರಗೋಡಿನ ಜನರ ವೈದ್ಯಕೀಯ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ಧಾರಕೈಗೊಳ್ಳಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ. ಆದರೆ ಗಡಿಯನ್ನು ಓಪನ್ ಮಾಡದಂತೆ ಹೇಳಿದೆ.

ಲಾಕ್ ಡೌನ್ ನಂತರದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು. ಹೀಗಾಗಿ ಮಂಗಳೂರಿನ ಆಸ್ಪತ್ರೆಗೆಯಲ್ಲಿ ಜನತೆ ಚಿಕಿತ್ಸೆಗೆ ಮುಂದಾಗುತ್ತಲೇ ಮಂಗಳೂರು ಕಾಸರಗೋಡು ಹೆದ್ದಾರಿಯನ್ನು ಬಂದ್ ಮಾಡಿತ್ತು. ಮಾತ್ರವಲ್ಲ ಕೇರಳ ಹಾಗೂ ಕರ್ನಾಟಕದ ಗಡಿಯನ್ನು ಸಂಪೂರ್ಣವಾಗಿ ಮುಚ್ಚಿತ್ತು. ಇದನ್ನು ಪ್ರಶ್ನಿಸಿ ಕೇರಳ ಸರಕಾರ ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು.

ಆದರೆ ಕೇರಳ ಹೈಕೋರ್ಟ್ ಕಾಸರಗೋಡು – ಮಂಗಳೂರು ಹೆದ್ದಾರಿಯನ್ನು ತೆರವುಗೊಳಿಸಿ ಕೊರೊನಾ ವೈರಸ್ ಸೋಂಕು ಪೀಡಿತರಿಗೆ ನೆರವಾಗುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ವಿಚಾರಣೆ ನಡೆಸಿರೋ ಸುಪ್ರೀಂ ಕೋರ್ಟ್ ಆರೋಗ್ಯದ ವಿಚಾರವಾಗಿರೋ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎರಡೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಸಭೆ ನಡೆಸಿ ಕೊರೊನಾ ಪೀಡಿತರಿಗೆ ಚಿಕಿತ್ಸೆಗೆ ನೆರವಾಗಬೇಕೆಂದು ಸೂಚಿಸಿದ್ದು, ಅರ್ಜಿಯ ವಿಚಾರಣೆಯನ್ನು ಎಪ್ರಿಲ್ 7ಕ್ಕೆ ಮುಂದೂಡಿಕೆ ಮಾಡಿದ್ದು, ಅಲ್ಲಿಯವರೆಗೆ ಗಡಿಯನ್ನು ಓಪನ್ ಮಾಡದಂತೆ ಸೂಚನೆ ನೀಡಿದೆ.