ಮಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇರಳ – ಕರ್ನಾಟಕ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಆದರೆ ಕೇರಳದಿಂದ ದೋಣಿಯ ಮೇಲೆ ಅಕ್ರಮವಾಗಿ ಜನರನ್ನು ಸಾಗಾಟ ಮಾಡುತ್ತಿದ್ದ ಯಾಕೂಬ್ ಗ್ಯಾಂಗ್ ನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. 8 ಮಂದಿ ಕೇರಳಿಗರನ್ನು ಬಂಧಿಸಿರೋ ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿದ್ದಾರೆ.

ಕೇರಳದಿಂದ ಯಾಕೂಬ್ ಹಾಗೂ ಇತರ 8 ಮಂದಿಯ ತಂಡ ದೋಣಿಯ ಮೂಲಕ ಕೇರಳದಿಂದ ಮಂಗಳೂರು ಹೊರವಲಯದ ಅಡ್ಡೂರಿಗೆ ಬಂದಿತ್ತು. ಖಚಿತ ಮಾಹಿತಿಯ ಮೇಲೆ ದಾಳಿ ನಡೆಸಿ ಮಂಗಳೂರು ಪೊಲೀಸರು ಅಕ್ರಮವಾಗಿ ಜಿಲ್ಲೆಯೊಳಗೆ ಪ್ರವೇಶಿಸಿರುವ 9 ಮಂದಿಯನ್ನು ಬಂಧಿಸಿದ್ದಾರೆ.

ಎಲ್ಲರ ಮೇಲೆಯೂ ಕ್ರಿಮಿನಲ್ ಕೇಸು ದಾಖಲಿಸಲಾಗಿದ್ದು, ಅವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷಾ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಯಾಕೂಬ್ ಕೇರಳದಿಂದ ಜನರನ್ನು ಮಂಗಳೂರಿಗೆ ದೋಣಿಯ ಮೇಲೆ ಸಾಗಾಟ ಮಾಡುತ್ತಿದ್ದ ಅನ್ನೋ ಆರೋಪ ಕೇಳಿಬಂದಿದೆ.

ಇದೀಗ ಯಾಕೂಬ್ ಗ್ಯಾಂಗ್ ಬಂಧನವಾಗುತ್ತಿದ್ದಂತೆಯೇ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮಾತ್ರವಲ್ಲ ಕೆಲವು ಅಂಬ್ಯುಲೆನ್ಸ್ ಡ್ರೈವರ್ ಗಳನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕೇರಳ ಗಡಿ ಬಂದ್ ಆಗಿರೋ ಹಿನ್ನೆಲೆಯಲ್ಲಿ ಈ ಗ್ಯಾಂಗ್ ಜನರನ್ನು ಕರ್ನಾಟಕಕ್ಕೆ ಸಾಗಾಟ ಮಾಡುವ ಕಾರ್ಯವನ್ನು ಮಾಡುತ್ತಿದ್ಯಾ ಅನ್ನೋ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ಇದೀಗ ಯಾಕೂಬ್ ಗ್ಯಾಂಗ್ ಬಂಧನವಾಗುತ್ತಿದ್ದಂತೆಯೇ ಮಂಗಳೂರಲ್ಲಿ ಆತಂಕ ಹೆಚ್ಚಾಗಿದೆ. ಮಂಗಳೂರು ಪೊಲೀಸರು ಈ ಬಗ್ಗೆ ಮಾಹಿತಿಯನ್ನು ಕಲೆಹಾಕುತ್ತಿದೆ.