ಬೆಂಗಳೂರು : ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಜಿಲ್ಲಾ ಮುಖಂಡನನ್ನ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ಮುಖಂಡ ಮುಜಾಮಿಲ್ ಪಾಷಾರನ್ನ ಡಿಜೆ ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ನಡೆದ ಗಲಭೆ ಪ್ರಕರದಲ್ಲಿ ಮುಜಾಮಿಲ್ ಪ್ರಮುಖ ಆರೋಪಿ ಎನ್ನಲಾಗಿದ್ದು, ಹೀಗಾಗಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಸಾಮಾಜಿಲ ಜಾಲತಾಣಗದಲ್ಲಿ ಅವಹೇಳನಕಾರಿ ಪೊಸ್ಟ್ ಮಾಡಿದ್ದಾರೆಂದು ಆರೋಪಿಸಿ ಶಾಸಕ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಸ್ಥಳಕ್ಕೆ ಡಿಜೆ ಪೊಲೀಸರು ಗಲಭೆ ನಡೆಸದಂತೆ ಮನವಿ ಮಾಡಿದರು. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ ಪೊಲೀಸ್ ಠಾಣೆ ಸೇರಿದಂತೆ ಹಲವು ಕಾರು ಹಾಗೂ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದಾರೆ.

ಕೆಜಿ ಹಳ್ಳಿಯಲ್ಲಿ ದಾಂಧಲೆ ಮಾಡುತ್ತಿದ್ದ ಗಲಭೆಕೋರರ ಜೊತೆ ಮುಜಾಮಿಲ್ ಪಾಷಾ ಸ್ಥಳದಲ್ಲೇ ಇದ್ದರು ಎನ್ನಲಾಗಿದೆ. ಅಲ್ಲದೇ ಗಲಭೆ ನಡೆಯುತ್ತಿದ್ದಾಗ ಮೈಕ್ ಹಿಡಿದುಕೊಂಡು ಗಲಭೆಗೋರರ ಜೊತೆ ಮಾತನಾಡಿದ್ದರು. ಹೀಗಾಗಿ ಗಲಭೆಗೆ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಿ ಡಿಜೆ ಪೊಲೀಸರು ಮುಜಾಮಿಲ್ ಪಾಷಾನನ್ನು ಬಂಧಿಸಿದ್ದಾರೆ.