- Advertisement -
ಮಣಿಪಾಲ : ಉಡುಪಿ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದೆರಡು ದಿನಗಳ ಹಿಂದೆ ಮಹಿಳೆ ದುಬೈನಿಂದ ವಾಪಾಸಾಗಿದ್ದರು. ಊರಿಗೆ ಮರಳುತ್ತಿದ್ದಂತೆಯೇ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ಕೊರೊನಾ ಹಿನ್ನೆಲೆಯಲ್ಲಿ ಮಹಿಳೆಯ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ರಕ್ತ ಹಾಗೂ ಕಫದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.