- Advertisement -
ಪುತ್ತೂರು : ತುಳುನಾಡ ವೀರಪುರುಷರಾದ ಕೋಟಿ ಚೆನ್ನಯ್ಯರ ಮೂಲಕ್ಷೇತ್ರದ ವಿವಾದ ನ್ಯಾಯಾಲಯದ ಮೆಟ್ಟಿಲೇರಿದೆ. ವಿವಾದದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ತಡೆಯಾಜ್ಞೆ ನೀಡಲು ನಿರಾಕರಿಸಿದೆ.
ಗೆಜ್ಜೆಗಿರಿಯಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಜಾಗದ ಮಾಲೀಕರಾದ ಶ್ರೀಧರ ಪೂಜಾರಿ ಅವರು ಪುತ್ತೂರಿನ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಸಮಿತಿಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದು, ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿಕೆ ಮಾಡಿದೆ.