ಕೆಪಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ : ಎಫ್ ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ಎಫ್ ಡಿಎ ಪರೀಕ್ಷೆಯ ಬರೆಯಲು ಸಿದ್ದರಾಗಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಕೆಪಿಎಸ್ ಸಿ ನಾಳೆ ನಡೆಸಲು ಉದ್ದೇಶಿಸಿರುವ ಎಫ್ ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನು ಮುಂದೂಡಲಾಗಿದೆ.

ಜನವರಿ 23ರಂದು ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ ಜನವರಿ 24 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರೋದು ಬಯಲಾಗಿದೆ. ಪ್ರಶ್ನೆ ಪತ್ರಿಕೆ ಬಯಲು ಮಾಡಿದ ಆರೋಪದ ಹಿನ್ನೆಲೆಯಲ್ಲಿ ರಾಚಪ್ಪ, ಚಂದ್ರು ಸೇರಿದಂತೆ ಒಟ್ಟು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರರಿಂದ 24 ಲಕ್ಷ ರೂಪಾಯಿ ಹಾಗೂ 3 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರೋದು ಬೆಳಕಿಗೆ ಬರುತ್ತಿದ್ದಂತೆಯೇ ನಾಳೆ ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಗೊಳಿಸಿ ಕೆಪಿಎಸ್ ಸಿ ಕಾರ್ಯದರ್ಶಿ ಸತ್ಯವತಿ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಅತೀ ಶೀಘ್ರದಲ್ಲಿಯೇ ಪರೀಕ್ಷೆಯನ್ನು ದಿನಾಂಕವನ್ಜು ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.

https://kannada.newsnext.live/kpsc-paper-leak-4-accused-arrest-bangalore/

Comments are closed.