ಎಫ್ ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ : ತಪ್ಪತಸ್ಥ ಅಧಿಕಾರಿಗಳು ಅಮಾನತ್ತು : ಸಮಗ್ರ ತನಿಖೆಗೆ ಯಡಿಯೂರಪ್ಪ ಆದೇಶ

ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ಷಮ್ಯ ಅಪರಾಧ ಅವರನ್ನು ಈಗಾಗಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದ್ದು, ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರೋದು ನಿನ್ನೆ ರಾತ್ರಿ ನನ್ನ ಗಮನಕ್ಕೆ ಬಂದಿದೆ. ಕೂಡಲೇ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದೇನೆ. ಈ ಕುರಿತು ಸಮಗ್ರ ತನಿಖೆಯೂ ನಡೆಯಲಿದೆ. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಇಂತಹ ಕಾರ್ಯವನ್ನು ಮಾಡಿರುವವರನ್ನು ಕೆಲಸದಿಂದಲೇ ವಜಾಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಜನವರಿ 23 ಮತ್ತು 24 ರಂದು ಎಫ್ ಡಿಎ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಈ ನಡುವಲ್ಲೇ ಕಿಡಿಗೇಡಿಗಳು ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದರು. ಸಿಸಿಬಿ ಪೊಲೀಸರು 7 ಮಂದಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Comments are closed.