ಬೆಂಗಳೂರು : KS Eshwarappa: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಎನಿಸಿರುವ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಇಂದು ಪ್ರತಿಭಟನೆಗಳನ್ನು ಹಮ್ಮಿಕೊಂಡ ಬೆನ್ನಲ್ಲೇ ಇಂದು ಈಶ್ವರಪ್ಪ ನಾಳೆ ಸಿಎಂ ಬೊಮ್ಮಾಯಿಯನ್ನು ಭೇಟಿಯಾಗಿ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನಾನು ಇಲ್ಲಿಯವರೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಾನು ಮೊದಲೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ . ಆದರೆ ಪಕ್ಷದ ಕೆಲವು ಮುಖಂಡರು ನನಗೆ ತರಾತುರಿ ಮಾಡದಂತೆ ಹೇಳಿದ್ದರು. ಈ ಪ್ರಕರಣದಿಂದ ಪಕ್ಷಕ್ಕೆ ಯಾವುದೇ ರೀತಿ ಮುಜುಗರ ಆಗಬಾರದು ಎಂದು ನಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೆ.ಎಸ್ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.
ನಾನು ದೇವರ ಮೇಲೆ ನಂಬಿಕೆ ಇಟ್ಟಿದ್ದೇನೆ. ನಾನು ಯಾವುದೇ ತಪ್ಪನ್ನು ಮಾಡಿಲ್ಲ. ಹೀಗಾಗಿ ನನಗೆ ಯಾವುದೇ ಭಯವಿಲ್ಲ. ನಾನು ತಪ್ಪು ಮಾಡಿದ್ದರೆ ಮಾತ್ರ ದೇವರಿಗೆ ಹೆದರಬೇಕು. ಈ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಯಲಿ ಎಂದು ನಾನು ಆಗ್ರಹಿಸುತ್ತೇನೆ. ಆದಷ್ಟು ಬೇಗ ನಾನು ಈ ಎಲ್ಲಾ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂಬ ನಂಬಿಕೆ ನನಗಿದೆ. ನಾಳೆ ನಾನು ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿಯಾಗಿ ರಾಜೀನಾಮೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನು ಓದಿ : Namma Metro : ಪ್ರಯಾಣಿಕರಿಗೆ ಬರೆ ಎಳೆದ ನಮ್ಮ ಮೆಟ್ರೋ : ಹೆಚ್ಚಳವಾಯ್ತು ಪಾಸ್ ದರ
ಇದನ್ನೂ ಓದಿ : Andhra Pradesh : ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿದುರಂತ : 6 ಬಲಿ, 12 ಕ್ಕೂ ಅಧಿಕ ಮಂದಿಗೆ ಗಾಯ
KS Eshwarappa will resign as minister tomorrow