KS Eshwarappa : ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎಸ್​ ಈಶ್ವರಪ್ಪ

ಬೆಂಗಳೂರು : KS Eshwarappa: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಎನಿಸಿರುವ ಪಂಚಾಯತ್​ ರಾಜ್​ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್​ ಇಂದು ಪ್ರತಿಭಟನೆಗಳನ್ನು ಹಮ್ಮಿಕೊಂಡ ಬೆನ್ನಲ್ಲೇ ಇಂದು ಈಶ್ವರಪ್ಪ ನಾಳೆ ಸಿಎಂ ಬೊಮ್ಮಾಯಿಯನ್ನು ಭೇಟಿಯಾಗಿ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.


ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನಾನು ಇಲ್ಲಿಯವರೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ ರಾಜ್​ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಾನು ಮೊದಲೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ . ಆದರೆ ಪಕ್ಷದ ಕೆಲವು ಮುಖಂಡರು ನನಗೆ ತರಾತುರಿ ಮಾಡದಂತೆ ಹೇಳಿದ್ದರು. ಈ ಪ್ರಕರಣದಿಂದ ಪಕ್ಷಕ್ಕೆ ಯಾವುದೇ ರೀತಿ ಮುಜುಗರ ಆಗಬಾರದು ಎಂದು ನಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೆ.ಎಸ್​ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.


ನಾನು ದೇವರ ಮೇಲೆ ನಂಬಿಕೆ ಇಟ್ಟಿದ್ದೇನೆ. ನಾನು ಯಾವುದೇ ತಪ್ಪನ್ನು ಮಾಡಿಲ್ಲ. ಹೀಗಾಗಿ ನನಗೆ ಯಾವುದೇ ಭಯವಿಲ್ಲ. ನಾನು ತಪ್ಪು ಮಾಡಿದ್ದರೆ ಮಾತ್ರ ದೇವರಿಗೆ ಹೆದರಬೇಕು. ಈ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಯಲಿ ಎಂದು ನಾನು ಆಗ್ರಹಿಸುತ್ತೇನೆ. ಆದಷ್ಟು ಬೇಗ ನಾನು ಈ ಎಲ್ಲಾ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂಬ ನಂಬಿಕೆ ನನಗಿದೆ. ನಾಳೆ ನಾನು ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿಯಾಗಿ ರಾಜೀನಾಮೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ : Namma Metro : ಪ್ರಯಾಣಿಕರಿಗೆ ಬರೆ ಎಳೆದ ನಮ್ಮ ಮೆಟ್ರೋ : ಹೆಚ್ಚಳವಾಯ್ತು ಪಾಸ್ ದರ

ಇದನ್ನೂ ಓದಿ : Andhra Pradesh : ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿದುರಂತ : 6 ಬಲಿ, 12 ಕ್ಕೂ ಅಧಿಕ ಮಂದಿಗೆ ಗಾಯ

KS Eshwarappa will resign as minister tomorrow

Comments are closed.