ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್ ಇನ್ನಿಲ್ಲ

0

ಬೆಂಗಳೂರು : ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್ (84 ವರ್ಷ) ಅವರು ಇನ್ನಿಲ್ಲ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೂ ತೀವ್ರ ಅನಾರೋಗ್ಯದಿಂದಾಗಿ ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿ 1936 ಫೆಬ್ರವರಿ 5 ರಂದು ಜನಿಸಿದ ಕೊಕ್ಕರೆಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್ ಕನ್ನಡ ಸಾಹಿತ್ಯ ಲೋಕ ಕಂಡ ಶ್ರೇಷ್ಟ ಕವಿಗಳಲ್ಲಿ ಒಬ್ಬರು.

ಮನಸು ಗಾಂಧಿ ಬಜಾರು, ನಿತ್ಯೋತ್ವಸ ಕವನ ಸಂಕಲನಗಳು ಕೆ.ಎಸ್.ನಿಸಾರ್ ಅಹಮದ್ ಅವರ ಪ್ರಸಿದ್ದ ಕವನ ಸಂಕಲಗಳು.

ಮನಸು ಗಾಂಧಿ ಬಜಾರು, ನೆನದವರ ಮನದಲ್ಲಿ, ಸುಮುಹೂರ್ತ, ಸಂಜೆ ಐದರ ಮಳೆ, ನಾನೆಂಬ ಪರಕೀಯ, ನಿತ್ಯೋತ್ವವ ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು, ಸಮಗ್ರ ಕವಿತೆಗಳು, ಬರಿರಂತರ, ನವೋಲ್ಲಾಸ್, ಆಕಾಶದ ಸರಹದ್ದುಗಳಿಲ್ಲ, ಅರವತ್ತೈದರ ಐಸಿರಿ, ಸಮಗ್ರ ಭಾವಗೀತೆಗಳು, ಅಚ್ಚುಮೆಚ್ಚು ಸೇರಿದಂತೆ ಹಲವು ಕವನ ಸಂಕಲನಗಳನ್ನು ಬರೆದಿದ್ದಾರೆ.


ಮಾಸ್ತಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗೊರೂರು ಪ್ರಶಸ್ತಿ, ಅನಕೃ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಪಂಪ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ನಾಡೋಜಾ ಪ್ರಶಸ್ತಿ, ಅರಸು ಪ್ರಶಸ್ತಿಗಳನ್ನು ಪಡೆದಿದ್ದಾರೆ. 2006ರಲ್ಲಿ ಶಿವಮೊಗ್ಗದಲ್ಲಿ ನಡೆದ 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

Leave A Reply

Your email address will not be published.