ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನಲ್ಲಿ ಕಂಡಕ್ಟರ್ ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರೊಬ್ಬರೊಂದಿಗೆ ಬಸ್ಸಿನ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ.

ಈ ಬಗ್ಗೆ ಮಹಿಳಾ ಪ್ರಯಾಣಿಕರು ವಿರೋಧವನ್ನು ವ್ಯಕ್ತಪಡಿಸಿದ್ದು, ಕಂಡಕ್ಟರ್ ಗೆ ಕಪಾಳಮೋಕ್ಷ ಮಾಡಿ ಮಾರ್ಗ ಮಾಧ್ಯದಲ್ಲಿಯೇ ಬಸ್ಸಿನಿಂದ ಇಳಿದಿದ್ದಾರೆ. ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿರುವ ಕುರಿತು ಮಹಿಳೆ ವಿಡಿಯೋ ಚಿತ್ರೀಕರಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಬಸ್ಸು ಪುತ್ತೂರು ಡಿಪೋಗೆ ಸೇರಿದ್ದಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಮಹಿಳಾ ಪ್ರಯಾಣಿಕರಿಗೆ ರಕ್ಷಣೆ ನೀಡಬೇಕಾದ ನಿರ್ವಾಹಕರೇ ಇದೀಗ ಕಿರುಕುಳ ನೀಡಿರೋದು ಸಾರ್ವಜನಿಕ ವಲಯದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಕೆಎಸ್ ಆರ್ ಟಿಸಿ ಅಧಿಕಾರಿಗಳು ಮಾತ್ರ ಪೋಲಿ ಕಂಡಕ್ಟರ್ ವಿರುದ್ದ ಯಾವುದೇ ಕ್ರಮವನ್ನು ಕೈಗೊಂಡಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಲಿ ಕಂಡಕ್ಟರ್ ವಿಡಿಯೋ..