ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಮುಂಬೈ ಹಾಗೂ ದುಬೈನಿಂದ ಬಂದಿರುವವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗಳ ಅಗತ್ಯವಿದ್ದು, ಕುಂದಾಪುರ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುತ್ತಿದ್ದು, ತೀವ್ರ ತರಹದ ಅನಾರೋಗ್ಯ ಸಮಸ್ಯೆ ಇರುವವರನ್ನು ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತದೆ.

ಕುಂದಾಪುರದಲ್ಲಿ ಸುಮಾರು 400 ಬೆಡ್ ಗಳ ಅಗತ್ಯವಿದ್ದು, 300 ಕುಂದಾಪುರ ಸರಕಾರಿ ಆಸ್ಪತ್ರೆಯಿಂದ 300 ಬೆಡ್ ಹಾಗೂ 100 ಬೆಡ್ ಅವಶ್ಯಕತೆಯಿರುವುದರಿಂದ ಆದರ್ಶ ಆಸ್ಪತ್ರೆಯನ್ನು ಬಳಸಿಕೊಳ್ಳಲಾಗುತ್ತಿದೆ. ಇನ್ನು ಹಳೆಯ ವಿನಯ ಆಸ್ಪತ್ರೆಯಲ್ಲಿ ಒಪಿಡಿ ಸೆಕ್ಷನ್ ತೆರೆಯಲಾಗುತ್ತದೆ. ಜನರಿಗೆ ಸಮಸ್ಯೆಯಾಗಬಾರದೆಂಬ ನಿಟ್ಟಿನಲ್ಲಿ ಕೋಟ ಸಮುದಾಯ ಆರೋಗ್ಯ ಕೇಂದ್ರವನ್ನು ಕುಂದಾಪುರ ತಾಲೂಕು ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಲಾಗಿದೆ ಎಂದಿದ್ದಾರೆ.