ಕುಂದಾಪುರದ ನರ್ಸ್ ಗೆ ಕೊರೊನಾ ಕೋಟ-ಕದ್ರಿಕಟ್ಟು, ಹಿಲಿಯಾಣದಲ್ಲಿ ಸೀಲ್ ಡೌನ್

0

ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಬ್ರಹ್ಮಾವರ ತಾಲೂಕಿನಾದ್ಯಂತ ಆರ್ಭಟಿಸುತ್ತಿದೆ. ಕುಂದಾಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಕೋಟದ ಕದ್ರಿಕಟ್ಟುವಿನಲ್ಲಿರುವ ಆಕೆಯ ಮನೆಯನ್ನು ಕೋಟ ಕಂದಾಯ ನಿರೀಕ್ಷಕರಾದ ರಾಜು ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಸೋಂಕಿತೆಯನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮನೆಯಲ್ಲಿದ್ದವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ.

ಇನ್ನು ಹಿಲಿಯಾಣದಲ್ಲಿ ಕೊರೊನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave A Reply

Your email address will not be published.