ಮಹಿಳಾ ಪೊಲೀಸ್ ಗೆ ಕೊರೊನಾ ಸೋಂಕು ಕೋಟತಟ್ಟು ಸೀಲ್ ಡೌನ್

0

ಕೋಟ : ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ವಾಸವಿದ್ದ ಮನೆ ಕೋಟತಟ್ಟು ಗ್ರಾಮ ಪಂಚಾಯತ್ ಕಚೇರಿ ಸಮೀಪದಲ್ಲಿನ ಮನೆ ಹಾಗೂ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

ಮಹಿಳೆಗೆ ಸೋಂಕು ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಕೋಟತಟ್ಟುವಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಮನೆಯವರ ಗಂಟಲು ದ್ರವದ ಪರೀಕ್ಷೆಯನ್ನು ನಡೆಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಾಗಿದೆ.

ಅಲ್ಲದೇ ಮಹಿಳೆ ವಾಸವಿದ್ದ ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂಧಿಗಳು ಸ್ಯಾನಿಟೈಸ್ ಮಾಡಿದ್ದಾರೆ.

ಕೊಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜಶೇಖರ ಮಂದಲಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವನಾಥ್ , ಕೋಟ ಆರ್.ಐ ರಾಜು ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂಧಿಗಳು ಸುತ್ತಮುತ್ತಲಿನ ಮನೆಗಳ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

Leave A Reply

Your email address will not be published.