ಗಾಯನ ನಿಲ್ಲಿಸಿದ ಗಾನ ಗಾರುಡಿಗ : ಎಸ್‌ಪಿ ಬಾಲಸುಬ್ರಹ್ಮಣ್ಯಂ ಇನ್ನು ನೆನಪು ಮಾತ್ರ

0

ಚೆನ್ನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಕಳೆದೊಂದು ತಿಂಗಳಿನಿಂದಲೂ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಇಹಲೋಕ ತ್ಯೆಜಿಸಿದ್ದಾರೆ.


ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 14 ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ತಜ್ಞ ವೈದ್ಯರ ತಂಡದ ಜೊತೆಗೆ ವಿದೇಶಿ ವೈದ್ಯರ ಸಹಕಾರದೊಂದಿಗೆ ಆರೈಕೆ ಮಾಡಲಾಗುತ್ತಿತ್ತು. ಅಲ್ಲದೇ ಆಗಸ್ಟ್ 24ರಂದು ಎಸ್ ಪಿಬಿ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿತ್ತು.

ಆದರೆ ಅವರ ಆರೋಗ್ಯ ಸ್ಥಿತಿ ವಿಷಮವಾಗಿತ್ತು.ಆ ಬಳಿಕದಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮೃತ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್ ನಲ್ಲಿ ನಡೆಯುವ ಬಗ್ಗೆ ಮಾಹಿತಿ ಸಿಕ್ಕಿದೆ.

1946ರ ಜೂನ್‌ 4 ರಂದು ಜನಿಸಿದ್ದ ಎಸ್‌ಪಿಬಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿದ್ದಾರೆ. ಇವರ ಸಾರ್ಥಕ ಸೇವೆಗೆ ಭಾರತ ಸರ್ಕಾರ 2011ರಲ್ಲಿ ಪದ್ಮಶ್ರೀ, 2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು.

Leave A Reply

Your email address will not be published.