ಅಂತರ್ ರಾಜ್ಯ ಸಂಚಾರಕ್ಕೆ ರಾಜ್ಯ ಸರಕಾರ ಅವಕಾಶ : ಲಾಕ್ ಡೌನ್ ನಲ್ಲಿ ಸಿಲುಕಿರುವವರಿಗೆ ಬಿಗ್ ರಿಲೀಫ್

0

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಬಂಧಿಯಾಗಿರುವರು ತಮ್ಮೂರಿನ ತೆರಳಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ. ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಅಂತರ್ ರಾಜ್ಯದಲ್ಲಿರುವವರು ಒಂದು ಬಾರಿ ಮಾತ್ರವೇ ತಮ್ಮ ಊರುಗಳಿಗೆ ತೆರಳಬಹುದಾಗಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಕೊರೊನಾ ಇನ್ನೂ 3 ರಿಂದ 4 ತಿಂಗಳ ಕಾಲ ಇರಬಹುದು. ಈ ಹಿನ್ನೆಲೆಯಲ್ಲಿ ಹೊರ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಬಂಧಿಯಾಗಿರುವವರಿಗೆ ವಿದ್ಯಾರ್ಥಿಗಳು, ಕಾರ್ಮಿಕರಿಗೆ ರಾಜ್ಯ ಸರಕಾರ ಅನುಕೂಲ ಕಲ್ಪಿಸಿದೆ.

ವಲಸೆ ಕಾರ್ಮಿಕರು ತಮ್ಮ ಖರ್ಚಿನಲ್ಲಿ ತೆರಳಬಹುದು. ಅಗತ್ಯವಿದ್ದರೆ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆದರೆ ಪ್ರಯಾಣ ಮಾಡುವವರ ಸ್ಯಾಂಪಲ್ ಸಂಗ್ರಹಿಸುವುದು ಕಡ್ಡಾಯವಾಗಿದೆ. ನಾಳೆಯಿಂದಲೇ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಕೆಂಪುವಲಯ ಹೊರತು ಪಡಿಸಿ ಉಳಿದ ವಲಯಗಳಲ್ಲಿ ಬಸ್ ಸಂಚಾರ ಇರಲಿದೆ ಎಂದಿದ್ದಾರೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಪುನಶ್ಚೇತನಕ್ಕೂ ಅವಕಾಶ ಕಲ್ಪಿಸಲಾಗಿದ್ದು, ಕಂಟೋನ್ಮೆಂಟ್ ಝೋನ್ ಗಳನ್ನು ಹೊರತು ಪಡಿಸಿ ರಾಜ್ಯದಲ್ಲಿ ಮೇ 4 ರಿಂದ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಮದ್ಯ ಮಾರಾಟ ಹಾಗೂ ಇತರ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುವ ಕುರಿತು ಮೇ 3ರ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ.

ಆದರೆ ಹೋಟೆಲ್ ಗಳಲ್ಲಿ ಕೇವಲ ಪಾರ್ಸೆಲ್ ಗೆ ಮಾತ್ರವೇ ಅವಕಾಶ ನೀಡಲಾಗಿದೆ. ಕೊರೋನಾದಿಂದ ಜನರು ಆತಂಕ, ಭೀತಿ ಮತ್ತು ಖಿನ್ನತೆಗೆ ಒಳಗಾಗದಂತೆ ತಿಳುವಳಿಕೆ ಮೂಡಿಸಬೇಕು. ಜನರಲ್ಲಿ ಅತ್ಮಸ್ಥೈರ್ಯ ತುಂಬುವಂತಹ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಇದುವರೆಗೂ ಮಾಧ್ಯಮಗಳು ಸಾಕಷ್ಟು ಕೆಲಸ ಮಾಡಿವೆ ಎಂದು ಶ್ಲಾಘಿಸಿದರು.

Leave A Reply

Your email address will not be published.