ಬೆಂಗಳೂರು : ದೇಶದಾದ್ಯಂತ ಮೂರನೇ ಹಂತದ ಲಾಕ್ ಡೌನ್ ಇಂದು ಮುಕ್ತಾಯವಾಗಲಿದೆ. ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಾಗೋದು ಬಹುತೇಕ ಪಕ್ಕಾ ಆಗಿದೆ. ಈ ನಡುವಲ್ಲೇ ರಾಜ್ಯ ಸರಕಾರ ಇನ್ನೆರಡು ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಆದೇಶವನ್ನು ವಿಸ್ತರಣೆ ಮಾಡಿದೆ.

ಮೇ 19ರ ವರೆಗೂ ಲಾಕ್ ಡೌನ್ ಆದೇಶ ಮುಂದುವರಿಯಲಿದೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಮೇ 2ರಂದು ಹೊರಡಿಸಲಾಗಿರುವ ಆದೇಶದನ್ವಯ ರಾಜ್ಯದಲ್ಲಿ ಲಾಕ್ ಡೌನ್ ಮಾರ್ಗಸೂಚಿಗಳು ಜಾರಿಯಲ್ಲಿರಲಿವೆ.

ಲಾಕ್ ಡೌನ್ ಆದೇಶ ಮುಂದುವರಿಕೆ ಮಾಡಿರುವುದರಿಂದಾಗಿ ಶೈಕ್ಷಣಿಕ ಸಂಸ್ಥೆಗಳು, ಥಿಯೇಟರ್, ಶಾಪಿಂಗ್ ಮಾಲ್, ಧಾರ್ಮಿಕ ಕೇಂದ್ರಗಳು ಬಂದ್ ಆಗಿರಲಿವೆ. ಮಾತ್ರವಲ್ಲ ಆಟೋ, ಟ್ಯಾಕ್ಸಿ ಓಡಾಟಕ್ಕೂ ನಿರ್ಬಂಧ ಹೇರಲಾಗಿದೆ.