ಭಜರಂಗದಳ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಇನ್ನಿಲ್ಲ

0

ಬೆಂಗಳೂರು : ಭಜರಂಗದಳದ ಮಾಜಿ ರಾಜ್ಯ ಸಂಚಾಲಕ, ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರು ಬೆಂಗಳೂರಿನ ಎಮ್.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿನ್ನೆ ರಾತ್ರಿಯೇ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದ ಮಹೇಂದ್ರ ಕುಮಾರ್‌ ಆರಂಭದ ದಿನಗಳಲ್ಲಿ ಭಜರಂಗ ದಳದಲ್ಲಿ ಗುರುತಿಸಿಕೊಂಡಿದ್ದರು. ಆದರೆ, 2008ರ ಮಂಗಳೂರು ಚರ್ಚ್‌ ದಾಳಿ ಪ್ರಕರಣದ ನಂತರ ಅವರು ಬಜರಂಗ ದಳಕ್ಕೆ ರಾಜೀನಾಮೆ ನೀಡಿದ್ದರು.

ಅಲ್ಲದೆ, ಕಳೆದ ಒಂದು ದಶಕದಿಂದ ನಿರಂತರವಾಗಿ ಬಿಜೆಪಿ ಮತ್ತು ಬಲಪಂಥೀಯರನ್ನು ಬಲವಾಗಿ ಟೀಕಿಸುತ್ತಿದ್ದರು. 2011ರಲ್ಲಿ ಜೆಡಿಎಸ್ ಪಕ್ಷವನ್ನು ಸೇರಿದ್ದ ಮಹೇಂದ್ರ ಕುಮಾರ್ ರಾಜಕೀಯವಾಗಿ ಗುರುತಿಸಿಕೊಂಡಿದ್ದಾರೆ. ಕೇಂದ್ರ ಸರಕಾರ ಸಿಎಎ ಹಾಗೂ ಎನ್ ಆರ್ ಸಿ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.

ಇತ್ತೀಚೆಗೆ ನಮ್ಮ ಧ್ವನಿ ಎಂಬ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದ ಮಹೇಂದ್ರ ಕುಮಾರ್ ಕೇಂದ್ರ ಸರಕಾರದ ಕ್ರಮಗಳನ್ನು ಖಂಡಿಸುತ್ತಲೇ ಬಂದಿದ್ದರು, ಇದೀಗ ಮಹೇಂದ್ರ ಕುಮಾರ್ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

ಮಂಗಳೂರಿನಲ್ಲಿ ಕೊರೊನಾ ಪೀಡಿತ ಮಹಿಳೆಯ ಅಂತ್ಯಕ್ರಿಯೆಗೆ ಅವಕಾಶ ನೀಡದೇ ಇರೋದಕ್ಕೆ ಶಾಸಕ ಭರತ್ ಶೆಟ್ಟಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಮಹೇಂದ್ರ ಕುಮಾರ್ ಅವರ ಅಂತ್ಯಕ್ರಿಯೆ ಹುಟ್ಟೂರಾಗಿರೋ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Leave A Reply

Your email address will not be published.