ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ -ಚೆನ್ನಯ ಹೆಸರು : ಕೇಂದ್ರಕ್ಕೆ ಶಿಫಾರಸು..!

ಬೆಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾಗಿರುವ ಕೋಟಿ ಚೆನ್ನಯ್ಯ ಹೆಸರನ್ನು ಇಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಭರವಸೆ ನೀಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಅದಾನಿ ತೆಕ್ಕೆಗೆ ಜಾರುತ್ತಿದ್ದಂತೆಯೇ ವಿಮಾನ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಹಲವು ಹೆಸರುಗಳನ್ನು ಇಡುವಂತಹ ಬೇಡಿಕೆ ಕೇಳಿಬಂದಿತ್ತು. ಅದ್ರಲ್ಲೂ ವಿಮಾನ ನಿಲ್ದಾಣಕ್ಕೆ ಕೋಟಿ – ಚೆನ್ನಯ ಹೆಸರನ್ನು ಇಡುವ ಬೇಡಿಕೆ ಹಲವು ವರ್ಷಗಳಿಂದಲೂ ಕೇಳಿಬರುತ್ತಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ವೀರಪುರುಷ ಕೋಟಿ-ಚೆನ್ನಯ’ ಹೆಸರಿಡುವಂತೆ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಸರಕಾರಕ್ಕೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸರಕಾರ ಭರವಸೆ ನೀಡಿದೆ.

ಶೂನ್ಯವೇಳೆಯಲ್ಲಿ ಉಮಾನಾಥ್ ಕೋಟ್ಯಾನ್ ಈ ವಿಚಾರ ಪ್ರಸ್ತಾಪ ಮಾಡಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ಹೆಸರು ಇಡುವಂತೆ ಆಗ್ರಹಿಸಿ ಈ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಹೋರಾಟ, ಸಮಾವೇಶಗಳು ನಡೆಯುತ್ತಿವೆ. ಜನರ ಭಾವನೆಗಳಿಗೆ ಬೆಲೆ ಕೊಟ್ಟು ಸರಕಾರ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಇದಕ್ಕೆ ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್ ಮೊದಲಾದವರು ಧ್ವನಿಗೂಡಿಸಿದರು.

https://kannada.newsnext.live/gejjegiri-koti-chennayya-deyibaidithi-padumale-garodi/

ಈ ಪ್ರಸ್ತಾಪಕ್ಕೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆಸಿ ಮಾಧುಸ್ವಾಮಿ, ಕೋಟಿ-ಚೆನ್ನಯ ಹೆಸರು ಇಡುವುದಕ್ಕೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗುವುದು. ಈ ಬಗ್ಗೆ ತಕ್ಷಣ ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

Comments are closed.