ಮಂಡ್ಯ : ಮತಾಂತರಕ್ಕೆ ಒತ್ತಾಯಿಸಿದ ಕಾರಣಕ್ಕೆ 12 ವರ್ಷದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಪಾಂಡವಪುರದಲ್ಲಿ ಘಟನೆ ನಡೆದಿದ್ದು ವಿದ್ಯಾರ್ಥಿನಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಂಡವಪುರದ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಬಲವಂತವಾಗಿ ಮತಾಂತರವಾಗುವಂತೆ ಚಿತ್ರಹಿಂಸೆ ನೀಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಚಿತ್ರಹಿಂಸೆ ತಾಳಲಾರದೆ ಮನೆಯಲ್ಲಿ ಯಾರು ಇಲ್ಲದ ವೇಳೆ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇಲಿ ಪಾಷಾಣ ಸೇವಿಸಿದ ವಿದ್ಯಾರ್ಥಿನಿ ನರಳಾಟ ಕಂಡ ಎದುರು ಮನೆಯವರು ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಶಾಲೆ ವಿರುದ್ಧ ಪೋಷಕರು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮತಾಂತರಕ್ಕೆ ಒತ್ತಾಯ ಆರೋಪ :ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ..!
- Advertisement -
Previous article
Next article
Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021