ಮಂಗಳೂರಲ್ಲಿ ಸಹಾಯಕ ಪೊಲೀಸ್ ಆಯುಕ್ತರಿಗೆ ಸೋಂಕು : ದ.ಕ. ಜಿಲ್ಲೆಯಲ್ಲಿಂದು 85 ಮಂದಿಗೆ ಕೊರೊನಾ !

0

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬಾರೀ ಏರಿಕೆಯಾಗುತ್ತಿದೆ. ಅದ್ರಲ್ಲೂ ಮಂಗಳೂರಲ್ಲಿ ಮಹಾಮಾರಿ ಪೊಲೀಸರ ಬೆನ್ನು ಬಿದ್ದಿದ್ದು, ಸಹಾಯಕ ಪೊಲೀಸ್ ಆಯುಕ್ತರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಇಂದು ಬರೋಬ್ಬರಿ 85 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ತುತ್ತಾಗುತ್ತಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 14 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಮಂಗಳೂರು ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಪೊಲೀಸ್ ಆಯುಕ್ತರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಎಸಿಪಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಕಳೆದ 10 ದಿನಗಳಿಂದಲೂ ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರಿಕೆಯನ್ನು ಕಾಣುತ್ತಿದೆ. ಜಿಲ್ಲೆಯಲ್ಲಿ ನಿನ್ನೆಯಷ್ಟೆ 44 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 741ಕ್ಕೆ ಏರಿಕೆಯಾಗಿದೆ. ಈ ಪೈಕಿ 385 ಮಂದಿ ಇದುವರೆಗೆ ಸೋಂಕಿನಿಂದ ಗುಣಮುಖರಾಗಿದ್ರೆ, 342 ಮಂದಿ ಇಂದಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಬರೋಬ್ಬರಿ 14 ಮಂದಿಯನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ.

ಅಲ್ಲದೇ ಇಂದು ಕೊರೊನಾ ಸ್ಪೋಟಗೊಳ್ಳುವ ಸಾಧ್ಯತೆಯಿದೆ. ಇಂದು 85 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ ಎನ್ನಲಾಗುತ್ತಿದೆ. ಈ ಕುರಿತು ಜಿಲ್ಲಾಡಳಿತ ಅಧಿಕೃತ ಆದೇಶ ಇನ್ನಷ್ಟೆ ಹೊರಡಿಸಬೇಕಾಗಿದೆ.

Leave A Reply

Your email address will not be published.