ಮಂಗಳೂರು : ದುಬೈನಿಂದ ಮಂಗಳೂರಿಗೆ ಬರೋಬ್ಬರಿ 57 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ನಿವಾಸಿ ಮಹಮ್ಮದ್ ಹಾಗೂ ಕಾಸಗೋಡು ನಿವಾಸಿ ಕುಂಞ ಹಮೀದ್ ಬಂಧಿತ ಆರೋಪಿಗಳು. ದುಬೈನಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ 1 ಕೆಜಿ 119 ಗ್ರಾಂ ತೂಕದ ಚಿನ್ನವನ್ನು ಸಾಗಾಟ ಮಾಡಲಾಗುತ್ತಿದ್ದು, ಇದರ ಮೌಲ್ಯ ಬರೋಬ್ಬರಿ 57 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ, ಚಿನ್ನವನ್ನು ಸ್ವಾಧೀಪ ಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.