- Advertisement -

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿರುವ ಕುರಿತು ಬೆದರಿಕೆಯ ಕರೆಯೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಏರ್ ಪೋರ್ಟ್ ನಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಐಎಸ್ ಎಫ್ ಸಿಬ್ಬಂದಿಹಾಗೂ ಪೊಲೀಸರಿಂದ ಸಂಪೂರ್ಣ ಏರ್ ಪೋರ್ಟ್ ತಪಾಸಣೆ ನಡೆಸಲಾಗುತ್ತಿದೆ.
ಮಧ್ಯಾಹ್ನದ ಸುಮಾರಿಗೆ ಬಂದಿರುವ ಬಾಂಬ್ ಬೆದರಿಕೆ ಕರೆ ಬಂದಿದ್ದು ಈ ಕುರಿತು ಏರ್ ಪೋರ್ಟ್ ಅಧಿಕಾರಿಗಳು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.