ಮಂಗಳೂರು: ಮಗುಚಿ ಬಿದ್ದ ಬಿಯರ್ ಲಾರಿ : ಬಿಯರ್ ಗಾಗಿ ಮುಗಿಬಿದ್ದ ಮದ್ಯಪ್ರಿಯರು

ಸುಳ್ಯ : ಬಿಯರ್ ಬಾಟಲಿಗಳನ್ನು ತುಂಬಿಸಿಕೊಂಡು ಮೈಸೂರಿನಿಂದ ಮಂಗಳೂರು ಕಡೆಗೆ ಹೊರಟಿದ್ದ ಲಾರಿ ಮಗುಚಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿಯಲ್ಲಿ ನಡೆದಿದೆ.

ಸುಮಾರು 45 ಲಕ್ಷ ಮೌಲ್ಯದ ಬಿಯರ್ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಅರಂತೋಡಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದು, ವಿದ್ಯುತ್ ತಂತಗಳು ಲಾರಿಯ ಮೇಲೆಯೇ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಮತ್ತು ನಿರ್ವಾಹಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ಬಿಯರ್‌ ಲಾರಿ ಮುಗುಚಿಬಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಅಪಘಾತದಲ್ಲಿ ಅಳಿದುಳಿದ ಮದ್ಯದ ಬಾಟಲಿಗಳನ್ನು ಮುಗಿಬಿದ್ದು ತೆಗೆದುಕೊಂಡು ಹೋಗಿದ್ದಾರೆನ್ನಲಾಗುತ್ತಿದೆ.

Comments are closed.