ಮಂಗಳೂರು : ಅಪಾರ್ಟ್ ಮೆಂಟ್ ವೊಂದರ ಗೋಡೆಯ ಮೇಲೆ ಕಿಡಿಗೇಡಿಗಳು ಉಗ್ರರ ಸಂಘಟನೆಯ ಪರ ಗೋಡೆ ಬರಹ ಬರೆದಿರುವ ಘಟನೆ ಬಂದರು ನಗರಿ ಮಂಗಳೂರಲ್ಲಿ ನಡೆದಿದೆ.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ವೊಂದರ ಕೌಂಪೌಂಡ್ ಮೇಲೆ ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಘೋಷಣೆಯನ್ನು ಬರೆದಿದ್ದಾರೆ.
ವಿವಾದಾತ್ಮಕ ಗೋಡೆ ಬರಹಗಳನ್ನು ಬರೆದಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕದ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಗೋಡೆ ಬರಹಗಳ ಮೇಲೆ ಪೈಂಟ್ ಮಾಡಿಸಿದ್ದಾರೆ. ಕಿಡಿಗೇಡಿಗಳು ಈ ಕೃತ್ಯವೆನಸಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.