45 ವಿದ್ಯಾರ್ಥಿಗಳಿಗೆ ಕೊರೊನಾ : ಮಂಗಳೂರಿನ ಕಾಲೇಜು, ಹಾಸ್ಟೇಲ್ ಸೀಲ್ ಡೌನ್

ಮಂಗಳೂರು : ಒಂದೇ ಕಾಲೇಜಿನ 45 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ಉಳ್ಳಾಲದಲ್ಲಿರುವ ಆಲಿಯ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಹಾಗೂ ವಿದ್ಯಾರ್ಥಿಗಳು ಉಳಿದುಕೊಳ್ಳುತ್ತಿದ್ದ ಹಾಸ್ಟೆಲ್ ನ್ನು ಸೀಲ್ ಡೌನ್ ಮಾಡಲಾಗಿದೆ.

ಕೇರಳದಿಂದ ಕಾಲೇಜಿಗೆ 100 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಈ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಕೊರೊನಾ ತಪಾಸಣೆಗೆ ಒಳಪಡಿಸಿದಾಗ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಕಾಲೇಜಿನ ಉಳ್ಳಾಲ ನಗರಸಭೆಯ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು ಭೇಟಿ ನೀಡಿದ್ದು, ಕಾಲೇಜು ಹಾಗೂ ವಿದ್ಯಾರ್ಥಿಗಳು ಉಳಿದುಕೊಂಡಿದ್ದ ಹಾಸ್ಟೆಲ್ ನ್ನು ಸೀಲ್ ಡೌನ್ ಮಾಡಿದ್ದಾರೆ. ವಿದ್ಯಾರ್ಥಿಗಳ ಜೊತೆಗೆ ಸಂಪರ್ಕದಲ್ಲಿದ್ದ ಇತರ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಗೆ ಒಳ ಪಡಿಸಿದ್ದಾರೆ. ಅಲ್ಲದೇ ಕಾಲೇಜು ಹಾಗೂ ಹಾಸ್ಟೆಲ್ ವ್ಯಾಪ್ತಿಯನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.

Comments are closed.