ಮಂಗಳೂರು : ಕೊರೊನಾ ಮಹಾಮಾರಿ ಕರಾವಳಿಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಮಂಗಳೂರಲ್ಲಿಂದು ಚಿಕಿತ್ಸೆ ಫಲಕಾರಿಯಾಗದೇ 66 ವರ್ಷದ ವೃದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಬಿಪಿ.ಶುಗರ್ ಬಳಲುತ್ತಿದ್ದ ಉಳ್ಳಾಲದ 66 ವರ್ಷದ ವೃದ್ದೆಯನ್ನು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆಯಷ್ಟೇ ವೃದ್ದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆದ್ರಿಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಇನ್ನೊಂದೆಡೆ ಕೊರೊನಾ ಮಹಾಮಾರಿ ಒಂದೊಂದೆ ಬಲಿ ಪಡೆಯುತ್ತಿದೆ.

ಇದೀಗ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯ ಜನತೆಗೆ ಕೊರೊನಾ ಸೋಂಕು ಆತಂಕವನ್ನು ತಂದೊಡ್ಡಿದೆ.