BIG NEWS : ಕರಾವಳಿಗರಿಗೆ ಗುಡ್ ನ್ಯೂಸ್ : ಮಂಗಳೂರಿನ ಮೊದಲ ಕೊರೊನಾ ಸೋಂಕಿತ ಗುಣಮುಖ

0

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿರೋ ಬೆನ್ನಲ್ಲೇ ಕರಾವಳಿಗರು ಆತಂಕಕ್ಕೆ ಒಳಗಾಗಿದ್ದಾರೆ. ಆದ್ರೆ ಕೊರೊನಾ ಆತಂಕದ ನಡುವಲ್ಲೇ ಕರಾವಳಿಗರು ನಿಟ್ಟುಸಿರು ಬಿಡುವ ಸುದ್ದಿಯೊಂದು ಹೊರಬಿದ್ದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿದ್ದ ಮೊದಲ ಕೊರೊನಾ ಸೋಂಕಿತ ಭಟ್ಕಳ ಮೂಲದ ವ್ಯಕ್ತಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಮಾರ್ಚ್ 19ರಂದು ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಟ್ಕಳ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಹೀಗಾಗಿ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಕಳೆದ ಹದಿನೈದು ದಿನಗಳಿಂದಲೂ ಆಸ್ಪತ್ರೆಯ ಐಸೋಲೇಷನ್ ನಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿತ್ತು. ಇದೀಗ ಎಪ್ರಿಲ್ 2 ಮತ್ತು 3ರಂದು ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ನೆಗೆಟಿವ್ ವರದಿ ಬಂದಿದೆ.

ಈ ಹಿನ್ನೆಲೆಯಲ್ಲಿ ಎಪ್ರಿಲ್ 6ರಂದು (ಸೋಮವಾರ) ಆಸ್ಪತ್ರೆಯಿಂದ ಭಟ್ಕಳದ ಮೂಲದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಆದರೆ ವ್ಯಕ್ತಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರಲು ಸೂಚನೆಯನ್ನು ನೀಡಲಾಗಿದ್ದು, ಸೋಮವಾರ ಬೆಳಗ್ಗೆ ವ್ಯಕ್ತಿಯನ್ನು ಭಟ್ಕಳಕ್ಕೆ ಕಳುಹಿಸಿಕೊಡಲಾಗುತ್ತಿದೆ.

Leave A Reply

Your email address will not be published.