ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಇದೀಗ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಬಂಟ್ವಾಳದ ಕಸಬಾದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ P-390 ಮಹಿಳೆಯ ಸಂಪರ್ಕದಿಂದ ಪಕ್ಕದ ಮನೆಯ 69 ವರ್ಷದ ವೃದ್ದನಿಗೆ ಕೊರೊನಾ ಸೋಂಕು ವ್ಯಾಪಿಸಿತ್ತು. ಇದೀಗ ವೃದ್ದನ ಸಂಪರ್ಕದಲ್ಲಿದ್ದ ವೃದ್ದನ ಕುಟುಂಬದ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಮೇ 19 ರಂದು ಕೊರೊನಾ ಸೋಂಕು ಪತ್ತೆಯಾಗಿದ್ದ 69 ವರ್ಷದ ವೃದ್ದನಿಂದ ಸೋಂಕು ತಗಲಿದೆ. ಇದೀಗ ವೃದ್ದನ ಕುಟುಂಬದ ಮೂವರಿಗೂ ಸೋಂಕು ಇರುವುದು ದೃಢಪಟ್ಟಿದೆ. ಆರಂಭದಲ್ಲಿ ಬಂಟ್ವಾಳದ ಮಹಿಳೆಯಿಂದ ಪಕ್ಕದ ಮನೆಯ ವೃದ್ದನಿಗೆ ಕೊರೊನಾ ಸೋಂಕು ವ್ಯಾಪಿಸಿತ್ತು.

ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಇದುವರೆಗೂ 17 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇದುವರೆಗೂ 31 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಜಿಲ್ಲೆಯಲ್ಲಿ 15 ಸಕ್ರೀಯ ಕೊರೊನಾ ಪ್ರಕರಣಗಳಿವೆ. ಕೊರೊನಾ 3 ಮಂದಿಯನ್ನು ಬಲಿಪಡೆದಿದ್ರೆ, 13 ಮಂದಿ ಚಿಕಿತ್ಸೆ ಪಡೆದು ಸೋಂಕಿನಿಂದ ಪಾರಾಗಿದ್ದಾರೆ.