ಮಂಗಳೂರು : ಕರಾವಳಿಯಲ್ಲಿ ಕೊರೊನಾ ಆರ್ಭಟ ಮತ್ತೆ ಶುರುವಾಗಿದೆ. ಮಂಗಳೂರಿನ ಉಳ್ಳಾಲದಲ್ಲಿ ಒಂದೇ ಮನೆಯ 12 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜನತೆಗೆ ಆತಂಕವನ್ನು ಮೂಡಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಲೇ ಹೆಚ್ಚು ಆತಂಕವನ್ನು ಉಂಟುಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ. ತದನಂತರದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿತ್ತು. ಆದ್ರೆ ಕಳೆದ ಹತ್ತು ದಿನಗಳಿಂದ ಮತ್ತೆ ಕೊರೊನಾ ಹೆಮ್ಮಾರಿಯ ಆರ್ಭಟ ಶುರುವಾಗಿದೆ. ಇಂದು ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಒಂದೇ ಕುಟುಂಬದ 12 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು. ಜಿಲ್ಲಾಡಳಿತ ಸೀಲ್ ಡೌನ್ ಮಾಡಿದೆ.

17 ಜನರಿದ್ದ ಕುಟುಂಬದ ಮಹಿಳೆಗೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮನೆಯನ್ನು ಸೀಲ್ ಡೌನ್ ಮಾಡಿ ಎಲ್ಲರನ್ನೂ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಇದೀಗ ಕುಟುಂಬದ 12 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಹೀಗಾಗಿ ಉಳ್ಳಾಲದಾದ್ಯಂತ ಆತಂಕದ ವಾತಾವಣೆ ನಿರ್ಮಾಣವಾಗಿದೆ. ಇನ್ನು ಉಳ್ಳಾಲದಲ್ಲಿನ ಪೊಲೀಸ್ ಸಿಬ್ಬಂದಿಗಳಿಗೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಇಂದು ಮತ್ತೆ ಇಬ್ಬರು ಪೊಲೀಸ್ ಸಿಬ್ಬಂದಿ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ.