ಮಂಗಳೂರು : 51 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು : ಸೀಲ್ ಡೌನ್

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಇತ್ತೀಚಿನ ದಿನಗಳಲ್ಲಿ ಮಂಗಳೂರು ನಗರದಲ್ಲಿನ ವೈದ್ಯಕೀಯ ಕಾಲೇಜು, ನರ್ಸಿಂಗ್ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿಯೇ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ನಿನ್ನೆಯಷ್ಟೇ ಖಾಸಗಿ ಕಾಲೇಜಿ 30ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಶ್ರೀದೇವಿ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಲೇಜನ್ನು ಸೀಲ್ ಡೌನ್ ಮಾಡಲಾಗಿದೆ.

https://kannada.newsnext.live/karnataka-corona-secondways-shutdown-schools-pmmod/

ನರ್ಸಿಂಗ್ ಕಾಲೇಜಿನಲ್ಲಿಂದು ವಿದ್ಯಾರ್ಥಿಗಳಿಗೆ ಆರ್ ಟಿಪಿಸಿಆರ್ ಟೆಸ್ಟ್ ಮಾಡುವ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಲೇಜನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಸೋಂಕಿತರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದ್ದು, ಸೋಂಕಿತರೊಂದಿಗೆ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

Comments are closed.