ಮಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿ ಮುಗಿಯುತ್ತಲೇ ಸೀಲ್ ಡೌನ್ ಮಾಡಲಾಗುತ್ತೆ ಅನ್ನೋ ಸುದ್ದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ.

ಮಂಗಳೂರು ನಗರವನ್ನು ಸೀಲ್ ಡೌನ್ ಮಾಡಿದ್ರೆ ಅಗತ್ಯ ವಸ್ತುಗಳು ಸಿಗುವುದಿಲ್ಲ. ಯಾರು ಕೂಡ ಮನೆಯಿಂದ ಹೊರಗೆ ಕಾಲಿರಿಸುವಂತಿಲ್ಲ ಅನ್ನೋ ವರದಿಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಹೇಳಿದ್ದಾರೆ.

ಮಂಗಳೂರು ನಗರದ ಹಲವು ಕಡೆಗಳಲ್ಲಿ ಸೀಲ್ ಡೌನ್ ಜಾರಿ ಮಾಡಲಾಗಿದೆ ಅನ್ನೋ ಕುರಿತು ವರದಿಗಳು ಪ್ರಸಾರವಾಗುತ್ತಿವೆ. ಆದರೆ ಇಂತಹ ವರದಿಗಳು ಕೇವಲ ನಿರಾಧಾರವಾಗಿದೆ. ಇಂತಹ ವರದಿಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಆದರೆ ಮಂಗಳೂರು ನಗರದಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದೆಯೇ ಹೊರತು ಸೀಲ್ ಡೌನ್ ಆದೇಶ ಜಾರಿ ಮಾಡಿಲ್ಲ ಎಂದಿದ್ದಾರೆ.