ಮಂಗಳೂರು : ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಾಳ ಗ್ರಾಮದಲ್ಲಿ ನಡೆದಿದೆ.
ಹಳೆಯಂಗಡಿ ತೋಕೂರು ನಿವಾಸಿ ಹರೀಶ್, ಬಂಟ್ವಾಳದ ದಡ್ಡಲ್ ಕಾಡ್ ನಿವಾಸಿ ಲೋಕನಾಥ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದಾರೆ. ಬಾಳದಲ್ಲಿರುವ ಫೆರಾವೊ ಲಾಡ್ಜಿಂಗ್ ಮತ್ತು ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಉತ್ತರ ಹಳ್ಳಿಯ ನಿವಾಸಿ ಸಂತ್ರಸ್ತೆ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಕುರಿತು ಸುರತ್ಕಲ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.