ನವದೆಹಲಿ : ಕೊರೊನಾ ವೈರಸ್ ಸೋಂಕು ಮಿತಿಮೀರುತ್ತಿರೋ ಹಿನ್ನೆಲೆಯಲ್ಲಿ ದೇಶದ ಜನತೆ ಸಾಕಷ್ಟು ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ದೇಶವಾಸಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಕೋರಿದ್ದಾರೆ. ನೀವು ನನ್ನನ್ನು ಕ್ಷಮಿಸುತ್ತೀರೆಂಬ ನಂಬಿಕೆಯಿದೆ ಎಂದಿದ್ದಾರೆ.

ಮನಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಮಹಾಮಾರಿ ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಕೆಲವರು ಲಾಕ್ ಡೌನ್ ಉದ್ದೇಶವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಲಾಕ್ ಡೌನ್ ನಿಯಮ ಮೀರಿದ್ರೆ ಕೊರೊನಾದಿಂದ ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ಕೊರೊನಾ ವಿರುದ್ದದ ಹೋರಾಟಕ್ಕೆ ಕೈ ಜೋಡಿಸಿ. ನಿಮಗೆ ನೀವೆ ಲಕ್ಷ್ಮಣ ರೇಖೆ ಹಾಕಿಕೊಳ್ಳಿ. ಈ ಲಕ್ಷ್ಮಣ ರೇಣೆಯನ್ನು ಯಾವುದೇ ಕಾರಣಕ್ಕೂ ದಾಟಬೇಡಿ. ವೈದ್ಯರು, ಸೈನಿಕರು, ನರ್ಸ್ ಗಳ ಸೇವೆಯನ್ನು ಅರ್ಥ ಮಾಡಿಕೊಳ್ಳಿ ಎಂದು ದೇಶದ ಜನರಲ್ಲಿ ಮೋದಿ ಮನವಿ ಮಾಡಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಕೊರೊನಾದಿಂದ ಗುಣಮುಖರಾದವರ ಜೊತೆ ಹಾಗೂ ಕೊರೊನಾ ಪೀಡಿತರ ಸುಶ್ರೂಶೆ ಮಾಡುತ್ತಿರುವ ವೈದ್ಯರ ಜೊತೆಗೂ ಮಾತನಾಡಿದ ನರೇಂದ್ರ ಮೋದಿ ಅವರು, ಕೊರೊನಾ ಪೀಡಿತರಿಗೆ ಧೈರ್ಯ ತುಂಬುಲಕ ಕೆಲಸವನ್ನು ಮಾಡಿದ್ದಾರೆ. ಕೊರೊನಾ ಸೋಂಕು ತಗುಲಿದ್ರೆ ಯಾರೂ ಭಯಪಡಬೇಡಿ. ಕೂಡಲೇ ವೈದ್ಯರನ್ನು ಸಂಪರ್ಕಿಸಿ ಎಂದಿದ್ದಾರೆ.