ಬ್ರಹ್ಮಾವರ : ಸ್ಟಾಫ್ ನರ್ಸ್ ಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರು ಪಡುಕೆರೆಯಲ್ಲಿ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕೊರೊನಾ ತಪಾಸಣೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಸ್ಟಾಫ್ ನರ್ಸ್ ನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ನರ್ಸ್ ನಿತ್ಯವೂ ಮನೆಗೆ ಬಂದು ಹೋಗುತ್ತಿದ್ದ ಹಿನ್ನೆಲೆಯಲ್ಲಿ ಮಣೂರಿನಲ್ಲಿರುವ ಅವರ ಮನೆಯನ್ನು ಕೋಟ ಕಂದಾಯ ನಿರೀಕ್ಷರಾದ ರಾಜು ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ ಮನೆಯವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.