ಬೆಂಗಳೂರು: ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಚರಿಸುತ್ತಿದ್ದ ಕಾರಿಗೆ ಕೆಎಸ್ಆರ್ ಟಿಸಿಬಸ್ ಢಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ.

ಪೆಟ್ರೋಲ್ ತುಂಬಿಸಿಕೊಂಡು ಹಿಂದಿರುಗುತ್ತಿದ್ದ ವೇಳೆಯಲ್ಲಿ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಶ್ರೀನಿವಾಸ ಪೂಜಾರಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರುಹಾನಿಗೊಳಗಾಗಿದ್ದು, ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

