ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೊರೊನಾ ಬಿಗ್ ಶಾಕ್ ಕೊಟ್ಟಿದೆ. ಸಚಿವ ಸುಧಾಕರ್ ಅವರ ತಂದೆ ಕೇಶವ ರೆಡ್ಡಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸಚಿವರ ಸುಧಾಕರ್ ಅವರ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಸುಧಾಕರ್ ಅವರ ತಂದೆಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸುಧಾಕರ್ ತಂದೆ ಅವರನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಇದೀಗ ವರದಿಯಲ್ಲಿ ಕೊರೊನಾ ಪಾಸಿಟಿವ್ ಇರೋದು ಪತ್ತೆಯಾಗಿದೆ.

ಇನ್ನು ಸಚಿವ ಸುಧಾಕರ್ ಹಾಗೂ ಕುಟುಂಬಸ್ಥರನ್ನೂ ಕೂಡ ಕೊರೊನಾ ತಪಾಸಣೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.