ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಚಿವರಿಗೆ ಆತಂಕವನ್ನು ತಂದೊಡ್ಡಿದೆ.

ಸಚಿವ ಡಾ.ಕೆ.ಸುಧಾಕರ್ ಅವರ ಮನೆಯ ಅಡುಗೆ ಕೆಲಸ ಮಾಡುತ್ತಿದ್ದಾತನಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಸಚಿವರ ತಂದೆಗೆ ಶಂಕಿತ ಕೊರೊನಾ ಲಕ್ಷಣಗಳು ಗೋಚರಿಸಿತ್ತು. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರ ಇಡೀ ಕುಟುಂಬ ಕೊರೊನಾ ತಪಾಸಣೆಗೆ ಒಳಪಟ್ಟಿತ್ತು. ಕೊರೊನಾ ತಪಾಸಣೆಯಲ್ಲಿ ಸಧಾಕರ್ ಅವರ ತಂದೆಗೆ ಕೊರೊನಾ ಸೋಂಕು ಇರುವುದು ನಿನ್ನೆಯೇ ದೃಢಪಟ್ಟಿತ್ತು. ಆದ್ರೀಗ ಪತ್ನಿ ಹಾಗೂ ಮಗಳಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಆದರೆ ಸಚಿವ ಸುಧಾಕರ್ ಹಾಗೂ ಇಬ್ಬರು ಗಂಡು ಮಕ್ಕಳ ಕೊರೊನಾ ತಪಸಣಾ ವರದಿಯಲ್ಲಿ ನೆಗೆಟಿವ್ ಬಂದಿರುವುದು ಕೊಂಚ ಸಮಾಧಾನವನ್ನು ನೀಡಿದೆ. ಈ ಕುರಿತು ಸಚಿವ ಡಾ.ಕೆ.ಸುಧಾಕರ್ ಅವರೇ ಟ್ವೀಟ್ ಮಾಡಿದ್ದು, ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಶುಭಕೋರಿದ್ದು, ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದಿದ್ದಾರೆ.