ಹುಟ್ಟಿ ಬೆಳೆದ ಮನೆಯನ್ನೇ ಸುಟ್ಟು ಹಾಕಿದ್ದಾರೆ : ಕಣ್ಣೀರಿಟ್ಟ ಶಾಸಕ ಅಖಂಡ ಶ್ರೀನಿವಾಸಮೂರ್ತಿ

0

ಬೆಂಗಳೂರು : ನನ್ನ ಮನೆಯ ಮೇಲೆ ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ದಾಳಿ ಮಾಡಿದ್ದಾರೆ. ಪೆಟ್ರೋಲ್ ಬಾಂಬ್, ಮಾರಕಾಸ್ತ್ರ ಗಳನ್ನು ಬಳಸಿ ಬೆಂಕಿ ಹಚ್ಚುವ ಕೃತ್ಯವನ್ನೆಸಗಿದ್ದಾರೆ. ಶಾಸಕನಾಗಿ ನನಗೆ ರಕ್ಷಣೆಯಿಲ್ಲ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಣ್ಣೀರಿಟ್ಟಿದ್ದಾರೆ.

ಡಿಜೆ ಹಳ್ಳಿಯಲ್ಲಿ ನಿನ್ನೆ ನಡೆದಿದ್ದ ದಾಂಧಲೆಯಿಂದಾಗಿ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯನ್ನು ಸಂಪೂರ್ಣವಾಗಿ ಸುಟ್ಟುಹಾಕಲಾಗಿತ್ತು. ಈ ಘಟನೆಯ ಬೆನ್ನಲ್ಲೇ ಅಖಂಡ ಶ್ರೀನಿವಾಸಮೂರ್ತಿ ಅವರು ವಿಧಾನಸೌಧದಲ್ಲಿ ಮಾತನಾಡಿದ್ರು. ನಮ್ಮ ತಂದೆ ತಾಯಿ ಕಟ್ಟಿಸಿದ ಮನೆಯನ್ನು ಸುಟ್ಟು ಹಾಕಿದ್ದಾರೆ.

ನಾವು ಕಳೆದ 50 ವರ್ಷಗಳಿಂದಲೂ ಆ ಮನೆಯಲ್ಲಿ ಬದುಕಿ ಬಾಳಿದ್ದೇವೆ. ಕಳೆದ 25 ವರ್ಷಗಳಿಂದಲೂ ಇಂತಹ ಘಟನೆ ನಡೆದಿರಲಿಲ್ಲ. ನಮ್ಮ ಮನೆಯ ಮೇಲೆ ದಾಳಿ ಮಾಡಿರುವ ಕಿಡಿಗೇಡಿಗಳು ಚಿನ್ನಾಭರಣ ಲೂಟಿ ಮಾಡಿದ್ದಾರೆ. ಇದರ ಹಿಂದೆ ಯಾರೇ ಇದ್ದರೂ ಕೂಡ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನವೀನ್ ನನ್ನ ಅಕ್ಕನ ಮಗ, ಆದರೆ ಅವನಿಗೂ ನನಗೂ ಯಾವುದೇ ಸಂಬಂಧವಿಲ್ಲ. ಘಟನೆಗೆ ಸಂಬಂಧಿಸಿದಂತೆ ಸಿಐಡಿ, ಸಿಬಿಐ ಸೇರಿದಂತೆ ಯಾವುದೇ ತನಿಖೆ ನಡೆಯಲಿದೆ ಆದರೆ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ. ಸಚಿವ ಅಶೋಕ್ ಅವರು ಮನೆಗೆ ಬಂದು ನಮಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡಿದ್ದಾರೆ. ನಮ್ಮ ಕುಟುಂಬಕ್ಕೆ ರಕ್ಷಣೆಯನ್ನು ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಹೇಳಿದ್ದಾರೆ.

Leave A Reply

Your email address will not be published.