ಮೈಸೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಮುಂಜಾನೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿದ್ದರಿಂದ ರಾಮದಾಸ ಅಸ್ವಸ್ಥರಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಧ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ರಾಮದಾಸ ಅವರಿಗೆ ಉಸಿರಾಟದ ತೊಂದರೆ ಎದುರಾಗಿರೋದರಿಂದ ವೈದ್ಯರು ಮುಂಜಾಗ್ರತಾ ಕ್ರಮವಾಗಿ ಕೊರೋನಾ ಟೆಸ್ಟ್ ಗೆ ಒಳಪಡಿಸಿದ್ದಾರೆ. ಬೆಳಗಿನ ಜಾವ 5 ಗಂಟೆಗೆ ರಾಮದಾಸ್ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.

ಕಳೆದ ಎರಡು ದಿನದಿಂದ ದಸರಾ ಉದ್ಘಾಟನೆಯ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ರಾಮದಾಸ್ ಅವರು ಧೀಡೀರ ಅಸ್ವಸ್ಥರಾಗಿರೋದು ಕಾರ್ಯಕರ್ತರ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲ ತಿಂಗಳ ಹಿಂದೆ ರಾಮದಾಸ್ ಅವರಿಗೆ ಹೃದಯಾಘಾತವಾಗಿತ್ತು.


ಆ ವೇಳೆ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೊಳಪಡಿಸಲಾಗಿತ್ತು. ಬಳಿಕ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಮತ್ತೊಮ್ಮೆ ಉಸಿರಾಟದ ತೊಂದರೆ ಹಾಗೂ ಎದೆನೋವಿನಿಂದ ರಾಮದಾಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.