ಮುಂಬೈ : ಕೊರೊನಾ ಮಹಾಮಾರಿ ಮಹಾರಾಷ್ಟ್ರವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ದೇಶದಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ವ್ಯಾಪಿಸಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಕೊರೊನಾ ಪೀಡಿತರ ಸಂಖ್ಯೆ 40,000 ದಾಟಿದ್ದು, ಮುಂಬೈ ನಗರದಲ್ಲೇ 25,000ದ ಗಡಿ ದಾಟಿದೆ.

ಮಹರಾಷ್ಟ್ರದಲ್ಲಿ ಕೊರೊನಾ ಸೋಂಕು ಕಾಡ್ಗಿಚ್ಚಿನಂತೆ ಹರಡುತ್ತಿದೆ. ನಿತ್ಯವೂ ಸಾವಿರಾರು ಮಂದಿ ಡೆಡ್ಲಿ ಮಹಾಮಾರಿಗೆ ತುತ್ತಾಗುತ್ತಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,382 ಮಂದಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ.

ಅದ್ರಲ್ಲೂ ಮುಂಬೈ ಮಹಾನಗರದಲ್ಲಿಯೇ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರೋದು ಆತಂಕವನ್ನು ಮೂಡಿಸಿದೆ. ಮಹಾರಾಷ್ಟ್ರ ರಾಜ್ಯದಲ್ಲಿ 40,000 ಮಂದಿ ಕೊರೊನಾ ಪೀಡಿತರಿದ್ರೆ, ಕೇವಲ ಮುಂಬೈ ಮಹಾನಗರದಲ್ಲಿಯೇ ಕೊರೊನಾ ಪೀಡಿತರರ ಸಂಖ್ಯೆ 25,000ದ ಗಡಿ ದಾಟಿದೆ. ಮಹಾರಾಷ್ಟ್ರ ಸರಕಾರ ಯಾವುದೇ ಕ್ರಮಗಳನ್ನು ಕೈಗೊಂಡರೂ ಕೂಡ ಕೊರೊನಾ ಸೋಂಕಿಗೆ ನಿಯಂತ್ರಣ ಹೇರುವುದಕ್ಕೆ ಸಾಧ್ಯವಾಗುತ್ತಿಲ್ಲ.

ಮಹಾರಾಷ್ಟ್ರದಲ್ಲಿ ಇದುವರೆಗೆ ಕೊರೊನಾ ಮಹಾಮಾರಿ 41 ಮಂದಿಯನ್ನು ಬಲಿ ಪಡೆದಿದೆ. ಸುಮಾರು 6,751 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಪೈಕಿ 5,524 ಮಂದಿ ಸರಕಾರಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ರೆ, 1,227 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾಗಿದ್ದಾರೆ.