MurugaShri case: ಮುರುಘಾ ಶ್ರೀಗಳಿಗಿಲ್ಲ ಬಿಡುಗಡೆ ಭಾಗ್ಯ: ಇನ್ನೂ 14 ದಿನಗಳ ಕಾಲ ಜೈಲು ಫಿಕ್ಸ್..!

ಚಿತ್ರದುರ್ಗ: MurugaShri case: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಮುರುಘಾ ಶರಣರ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಬಂಧನದಲ್ಲಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ಅಂದರೆ ನವೆಂಬರ್ 3ರವರೆಗೆ ವಿಸ್ತರಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಮಹಿಳಾ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನದ ಅವಧಿಯೂ ವಿಸ್ತರಣೆಯಾಗಿದೆ.

ಈಗಾಗಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದಡಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮುರುಘಾ ಶರಣರ ವಿರುದ್ಧ ಅ.14ರಂದು ಮತ್ತೋರ್ವ ಮಹಿಳೆ ದೂರು ದಾಖಲಿಸಿದ್ದರು. ಮೈಸೂರಿನಲ್ಲಿ ಮಠದ ಸಹಾಯಕಿಯೊಬ್ಬರು ಈ ದೂರು ದಾಖಲಿಸಿದ್ದರು, ಮುರುಘಾ ಶ್ರೀಗಳು ತನ್ನಿಬ್ಬರು ಮಕ್ಕಳು ಸೇರಿದಂತೆ ಮತ್ತಿಬ್ಬರು ಮಕ್ಕಳ ಮೇಲೆಯೂ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆ ಅ.17ರಂದು ಪೊಲೀಸರು ಹಾಗೂ ಸಿಡಬ್ಲೂಸಿ ಅಧಿಕಾರಿಗಳು ಮಹಿಳೆಯ ಮತ್ತು ಆಕೆಯ ಒಬ್ಬ ಮಗಳ ಹೇಳಿಕೆಯನ್ನು ಪಡೆದುಕೊಂಡಿದ್ದರು.

ಪೊಲೀಸರ ವಿಚಾರಣೆ ವೇಳೆ 4 ಮಕ್ಕಳ ಮೇಲೆ ಮುರುಘಾ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಹೇಳಿಕೆ ನೀಡಿದ್ದರು. ‘ಪತಿ ಇಲ್ಲದ ಕಾರಣ ತಾನು ಮಠದಲ್ಲಿ ಅಡುಗೆ ಕೆಲಸವನ್ನು ನಿರ್ವಹಿಸುತ್ತಿದ್ದೆ. ತನ್ನ ಮಕ್ಕಳು ಮಠದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ನನ್ನ ಇಬ್ಬರೂ ಮಕ್ಕಳ ಮೇಲೆಯೂ ಶ್ರೀಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮುರುಘಾ ಶರಣರಿಗೆ ಸಾಮಾಜಿಕ, ರಾಜಕೀಯ, ಧಾರ್ಮಿಕ ಪ್ರಭಾವ ಇರುವ ಕಾರಣ ಈ ಬಗ್ಗೆ ತಡವಾಗಿ ದೂರು ನೀಡುತ್ತಿದ್ದೇನೆ’ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದರು.

ಈ ಸಂಬಂಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಒಟ್ಟು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಮುರುಘಾ ಶರಣರ ಸಹಾಯಕರಾದ ಮಹಾಲಿಂಗ, ಅಡುಗೆ ಸಹಾಯಕ ಕರಿಯಪ್ಪ ಎಂಬಿಬ್ಬರ ಮೇಲೆ ಹೊಸದಾಗಿ ಕೇಸ್ ದಾಖಲಾಗಿತ್ತು. ಈವರೆಗೆ ಪ್ರಮುಖ ಆರೋಪಿ ಮುರುಘಾ ಶ್ರೀ ಸೇರಿದಂತೆ ಮಹಿಳಾ ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರಯ್ಯ, ಸಹಾಯಕ ಮಹಾಲಿಂಗ, ಅಡುಗೆ ಸಹಾಯಕ ಕರಿಬಸಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

MurugaShri case : ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷರ ನೇಮಕ:

ಈ ನಡುವೆ ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ನೇಮಕವಾಗಿದೆ. ಹಲವರ ವಿರೋಧಗಳ ನಡುವೆಯೂ ಕಾನೂನು ಪ್ರಕ್ರಿಯೆ ಮೂಲಕ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ಪೀಠಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಬಗ್ಗೆ ಹೈಕೋರ್ಟ್ ಅನುಮತಿ ಪಡೆದು ನಿನ್ನೆ ಮುರುಘಾ ಮಠದ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮಠದಲ್ಲಿ ಎಂದಿನಂತೆ ಧಾರ್ಮಿಕ, ಸೇವಾ, ಪೂಜಾ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: BCCI ಮುಂದೆ PCB ಜುಜುಬಿ, ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯ ಒಟ್ಟು ಮೌಲ್ಯ ಎಷ್ಟು ಗೊತ್ತಾ?

ಇದನ್ನೂ ಓದಿ: Tax exemption Gandhadagudi : ಅಪ್ಪು ಅಭಿಮಾನಿಗಳಿಗೆ ಸರ್ಕಾರದ ಗಿಫ್ಟ್ : ಗಂಧದಗುಡಿಗೆ ತೆರಿಗೆ ವಿನಾಯ್ತಿ

Murughashri case: judicial custody extended till november 3rd

Comments are closed.