ಬೆಂಗಳೂರು : ಮಾಜಿ ಭೂಗತ ದೊರೆ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿಧನರಾಗಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಮುತ್ತಪ್ಪ ರೈ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಬುಧವಾರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 1.55 ಗಂಟೆಗೆ ಮೃತಪಟ್ಟಿದ್ದಾರೆ ಎಂದು ರೈ ಪುತ್ರ ರಿಕ್ಕಿ ಸ್ಪಷ್ಟಪಡಿಸಿದ್ದಾರೆ.

ಕಳೆದ ಐದಾರು ತಿಂಗಳ ಹಿಂದೆಯಷ್ಟೇ ತನಗೆ ಕ್ಯಾನ್ಸರ್ ಇರುವುದು ಖುದ್ದು ಮುತ್ತಪ್ಪ ರೈ ಹೇಳಿಕೊಂಡಿದ್ದಾರೆ. ಕ್ಯಾನ್ಸರ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಥ್ಲೆಟ್ ಅಸೋಸಿಯೇಷನ್ ಅಧ್ಯಕ್ಷ ಹುದ್ದೆ ಹಾಗೂ ಜಯಕರ್ನಾಟಕ ಸಂಘಟಯ ರಾಜ್ಯಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರು. ಭೂಗತ ಚಟುವಟಿಕೆ ತ್ಯೆಜಿಸಿದ್ದರು, ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

ಜಯಕರ್ನಾಟಕ ಸಂಘಟನೆಯನ್ನು ಕಟ್ಟಿ ಆ ಮೂಲಕ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ತುಳುವಿನ ಕಂಚಿಲ್ದ ಬಾಲೆ ಚಿತ್ರದಲ್ಲಿ ನಟಿಸಿದ್ದರು. ಇಬ್ಬರು ಗಂಡು ಮಕ್ಕಳಿದ್ದಾರೆ. 2013 ರಲ್ಲಿ ಅನಾರೋಗ್ಯದಿಂದ ಪತ್ನಿ ನಿಧನರಾಗಿದ್ದರು.

ಮುತ್ತಪ್ಪ ರೈ ಅವರ ಅಂತ್ಯಕ್ರಿಯೆ ಬಿಡದಿ ಸಮೀಪದಲ್ಲಿರುವ ನಿವಾಸದ ಬಳಿ ನೆರವೇರಿಸುವ ಸಾಧ್ಯತೆ ಇದೆ. ಲಾಕ್ ಡೌನ್ ನಿಯಾಮಗಳ ಪ್ರಕಾರ ಅಂತ್ಯಸಂಸ್ಕಾರದಲ್ಲಿ 20 ಜನಕ್ಕಿಂತ ಹೆಚ್ಚು ಜನ ಇರುವಂತೆ ಇಲ್ಲ. ಹೀಗಾಗಿ ಅಂತ್ಯಕ್ರಿಯೆಯಲ್ಲಿ ಕೇವಲ ರೈ ಕುಟುಂಬ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.