ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗೆ ಕೊರೊನಾ ಸೋಂಕು ದೃಢ

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ರಾಜಕಾರಣಿಗಳ ಬೆನ್ನು ಬಿದ್ದಿದೆ. ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ವೈರಸ್ ಸೋಂಕು ದೃಡಪಟ್ಟಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರೇ ಖುದ್ದು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನಾನು ಕೋವಿಡ್ -19 ಪರೀಕ್ಷೆಗೆ ಒಳಪಟ್ಟಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಆದರೆ ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಕೂಡ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.

ನಿಮ್ಮ ಶುಭಾಶಯ ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲಿಯೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.

Leave A Reply

Your email address will not be published.