ಮಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರೋ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ರೈತರಿಂದ ಹಾಲು ಖರೀದಿಯನ್ನು ನಿಲ್ಲಿಸಿತ್ತು.

ಆದ್ರೀಗ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ನಡುವಲ್ಲೇ ಹಾಲು ಖರೀದಿಗೆ ಅವಕಾಶ ನೀಡಿರೋ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಪ್ರಾಥಮಿಕ ಸಹಕಾರ ಸಂಘಗಳ ಸದಸ್ಯರಿಂದ ಹಾಲು ಖರೀದಿಗೆ ಮುಂದಾಗಿದೆ.

ಹೀಗಾಗಿ ಇಂದು (ಮಾರ್ಚ್ 30) ಸಂಜೆಯಿಂದಲೇ ಹಾಲು ಖರೀದಿಸಲಾಗುತ್ತದೆ ಎಂದು ದಕ್ಷಿಣ ಕನ್ನಡ ದಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ವಿ. ಹೆಗ್ಡೆ ಅವರು ತಿಳಿಸಿದ್ದಾರೆ.