ಉಡುಪಿ : ಬಾಗಿಲು ಮುರಿದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದಲ್ಲಿದ್ದ ನಾರಾಯಣ ಗುರುಗಳ ಬೆಳ್ಳಿಯ ಪಾದುಕೆಯನ್ನು ಕಳವು ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ತೆಂಕ ಎರ್ಮಾಳಿನಲ್ಲಿ ನಡೆಡಿದೆ.

ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಾಣಿಕೆ ಹುಂಡಿಯನ್ನು ಒಡೆಯಲು ವಿಫಲ ಯತ್ನ ನಡೆಸಿದ್ದಾರೆ. ನಂತರ ಗರ್ಭಗುಡಿಯೊಳಗೆ ಪ್ರವೇಶಿಸಿದ ಕಳ್ಳರು ಸುಮಾರು 50 ಸಾವಿರ ಬೆಲೆ ಬಾಳುವ ಬೆಳ್ಳಿಯ ಪಾದುಕೆಯನ್ನು ಕಳವು ಮಾಡಿದ್ದಾರೆ.

ಕಳ್ಳತನದ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪಡುಬಿದ್ರಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯರೇ ಈ ಕಳ್ಳತನವೆಸಗಿರೋ ಕುರಿತು ಅನುಮಾನ ವ್ಯಕ್ತವಾಗುತ್ತಿದೆ.


