ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ದೇಶದಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಆದೇಶ ನಾಳೆಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟರ್ ಪೇಜ್ ಪಿಎಂಓ ಇಂಡಿಯಾದಲ್ಲಿ ಈ ಕುರಿತು ಪ್ರಕಟಿಸಲಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಅವರು ಭಾಷಣೆ ಮಾಡಲಿದ್ದು, ಲಾಕ್ ಡೌನ್ ಅಂತ್ಯವಾಗುತ್ತಾ, ಮುಂದುವರಿಯುತ್ತಾ ? ಹೊಸ ಯೋಜನೆಗಳು ಘೋಷಣೆಯಾಗುತ್ತಾ ? ಅನ್ನು ಎಲ್ಲಾ ಪ್ರಶ್ನೆಗಳಿಗೆ ಮೋದಿ ಅವರು ಉತ್ತರ ನೀಡಲಿದ್ದಾರೆ.
