ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಿಬಿಎಸ್ಇ ವಿದ್ಯಾರ್ಥಿಗಳಿಗೂ ರಿಲೀಫ್

0

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1ನೇ ತರಗತಿಯಿಂದ 7ನೇ ತರಗತಿ ಹಾಗೂ ಪ್ರೌಢಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಲು ಸರಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಎಪ್ರಿಲ್ 14ರವರೆಗೆ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗಿತ್ತು. ಆದ್ರೆ ವಿದ್ಯಾರ್ಥಿಗಳ ಪರೀಕ್ಷೆಯ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟನೆಯನ್ನು ಕೊಟ್ಟಿರಲಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು.

ಸಿಬಿಎಸ್ ಇ ಪಠ್ಯಕ್ರಮದಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿರೋ ವಿದ್ಯಾರ್ಥಿಗಳಿಗೂ ಕೂಡ ಪರೀಕ್ಷೆಯಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಆದರೆ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಎಪ್ರಿಲ್ 14ರ ನಂತರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Leave A Reply

Your email address will not be published.